ಯೆರೆಮೀಯ 31:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.