ಯೆರೆಮೀಯ 31:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.