Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:33
36 ತಿಳಿವುಗಳ ಹೋಲಿಕೆ  

ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.


ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.


ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.


ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು