ಯೆರೆಮೀಯ 31:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇವಿುಸುವಾತನೂ ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು. ಅಧ್ಯಾಯವನ್ನು ನೋಡಿ |