Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:40
23 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.


ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.


ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.


ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.


ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.


ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.


ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು