ಯೆರೆಮೀಯ 31:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”