Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:9
43 ತಿಳಿವುಗಳ ಹೋಲಿಕೆ  

ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.


ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.


ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.


“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು