Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:15
13 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು