ಯೆರೆಮೀಯ 32:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿ |
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.