Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:19
35 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.


ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.


ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು