ಯೆರೆಮೀಯ 32:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ. ಅಧ್ಯಾಯವನ್ನು ನೋಡಿ |