Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:39
38 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು