Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:4
13 ತಿಳಿವುಗಳ ಹೋಲಿಕೆ  

ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು