Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜನ ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:43
7 ತಿಳಿವುಗಳ ಹೋಲಿಕೆ  

ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,


ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು