Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕ ಮಾಡಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಬೆಳ್ಳಿಯನ್ನು ತೂಕಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:9
11 ತಿಳಿವುಗಳ ಹೋಲಿಕೆ  

ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.


ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು