Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:14
31 ತಿಳಿವುಗಳ ಹೋಲಿಕೆ  

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು