Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಇಂತೆನ್ನುತ್ತಾನೆ - ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವುಗಳು ಶಾಶ್ವತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಬಹುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:20
12 ತಿಳಿವುಗಳ ಹೋಲಿಕೆ  

ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.


ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.


ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.


ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು