Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:22
23 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.


ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”


ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,


ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು