ಯೆರೆಮೀಯ 33:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ? ಅಧ್ಯಾಯವನ್ನು ನೋಡಿ |