ಯೆರೆಮೀಯ 33:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ. ಅಧ್ಯಾಯವನ್ನು ನೋಡಿ |