ಯೆರೆಮೀಯ 33:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್ ನಿರ್ಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.