Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:9
40 ತಿಳಿವುಗಳ ಹೋಲಿಕೆ  

ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.


ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!


“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.


ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು