Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:1
14 ತಿಳಿವುಗಳ ಹೋಲಿಕೆ  

ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.


“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು