Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:13
24 ತಿಳಿವುಗಳ ಹೋಲಿಕೆ  

ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.


ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು