ಯೆರೆಮೀಯ 34:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.