Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:17
26 ತಿಳಿವುಗಳ ಹೋಲಿಕೆ  

ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,


ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು