Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗಿ ನನ್ನ ಮುಂದೆ ಮಾಡಿದ ಒಪ್ಪಂದದ ನಿಬಂಧನೆಗಳನ್ನು ಕೈಕೊಳ್ಳದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:18
10 ತಿಳಿವುಗಳ ಹೋಲಿಕೆ  

ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,


ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.


“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು