Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:22
36 ತಿಳಿವುಗಳ ಹೋಲಿಕೆ  

ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು