ಯೆರೆಮೀಯ 34:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿ |