ಯೆರೆಮೀಯ 35:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.” ಅಧ್ಯಾಯವನ್ನು ನೋಡಿ |