Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:16
8 ತಿಳಿವುಗಳ ಹೋಲಿಕೆ  

“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು