Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:4
35 ತಿಳಿವುಗಳ ಹೋಲಿಕೆ  

ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,


ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.


ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.


ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ


ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು