Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ತೋಟ ಮಾಡಬಾರದು, ಅನುಭವಿಸಲೂ ಬಾರದು; ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು; ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗುವದು ಎಂದು ಅಪ್ಪಣೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:7
11 ತಿಳಿವುಗಳ ಹೋಲಿಕೆ  

ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.


ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು