ಯೆರೆಮೀಯ 36:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು. ಅಧ್ಯಾಯವನ್ನು ನೋಡಿ |