Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು, ಅಂತು ಪ್ರಧಾನರೆಲ್ಲರೂ ಕೂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:12
13 ತಿಳಿವುಗಳ ಹೋಲಿಕೆ  

ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.


ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,


ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.


ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,


ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.


ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು