ಯೆರೆಮೀಯ 36:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು. ಅಧ್ಯಾಯವನ್ನು ನೋಡಿ |