Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವನೂ ಇವನ ಸಂತತಿಯವರೂ ಸೇವಕರೂ ನಡಿಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ ಯೆರೂಸಲೇವಿುನವರನ್ನೂ ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:31
16 ತಿಳಿವುಗಳ ಹೋಲಿಕೆ  

ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.


“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,


ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು