ಯೆರೆಮೀಯ 36:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.” ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.