Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:15
27 ತಿಳಿವುಗಳ ಹೋಲಿಕೆ  

ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.


ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.


ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು