ಯೆರೆಮೀಯ 37:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು. ಅಧ್ಯಾಯವನ್ನು ನೋಡಿ |