Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:19
16 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.


ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು