Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:7
22 ತಿಳಿವುಗಳ ಹೋಲಿಕೆ  

ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.


ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.


ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.


ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು