Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನಿಯದವರು ಪುನಃ ಬಂದು ಈ ನಗರದ ಮೇಲೆ ದಾಳಿ ನಡೆಸುವರು. ಇದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಹಾಕುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಸ್ದೀಯರು ಪುನಃ ಮತ್ತೆ ಬಂದು ಈ ಪಟ್ಟಣವನ್ನು ಪ್ರತಿಭಟಿಸಿ ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಬಾಬಿಲೋನಿನ ಸೈನ್ಯವು ಇಲ್ಲಿಗೆ ಬರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಬಾಬಿಲೋನಿನ ಆ ಸೈನ್ಯವು ಜೆರುಸಲೇಮನ್ನು ವಶಪಡಿಸಿಕೊಂಡು ಅದನ್ನು ಸುಟ್ಟುಹಾಕುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:8
9 ತಿಳಿವುಗಳ ಹೋಲಿಕೆ  

ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.


ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು