ಯೆರೆಮೀಯ 38:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿ |