Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕಳಲ್ಲಿ ಇಟ್ಟುಕೋ ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:12
6 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.


ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು