Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:13
17 ತಿಳಿವುಗಳ ಹೋಲಿಕೆ  

ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.


ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.


ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


“ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು