ಯೆರೆಮೀಯ 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು. ಅಧ್ಯಾಯವನ್ನು ನೋಡಿ |