Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:2
20 ತಿಳಿವುಗಳ ಹೋಲಿಕೆ  

ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.


ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.


ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.


ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”


ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು