ಯೆರೆಮೀಯ 38:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತವಿುತ್ರರು ನಿನ್ನ ಕಾಲುಗಳು ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು. ಅಧ್ಯಾಯವನ್ನು ನೋಡಿ |