Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ! ತಿಳಿಯದಿದ್ದರೆ ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಚಿದ್ಕೀಯನು ಯೆರೆಮೀಯನಿಗೆ - ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಚಿದ್ಕೀಯನು ಯೆರೆಮೀಯನಿಗೆ ಹೀಗೆ ಹೇಳಿದನು: “ನಾನು ನಿನ್ನ ಸಂಗಡ ಮಾತನಾಡುತ್ತಿದ್ದೆ ಎಂದು ಯಾರಿಗೂ ಹೇಳಬೇಡ. ಇಲ್ಲವಾದರೆ ನೀನು ಸಾಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಚಿದ್ಕೀಯನು ಯೆರೆಮೀಯನಿಗೆ, “ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:24
3 ತಿಳಿವುಗಳ ಹೋಲಿಕೆ  

ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು